ಶಾಲಾ ಬ್ಲಾಗ್ ನ ಉದ್ಘಾಟನಾ ದಿನಾಂಕ: 15-08-2020

Tuesday, March 15, 2022

ವಿಶ್ವ ಗ್ರಾಹಕರ ಹಕ್ಕುಗಳ ದಿನ

ಇಂದು ನಮ್ಮ ಶಾಲೆಯಲ್ಲಿ ವಿಶ್ವ ಗ್ರಾಹಕರ ಹಕ್ಕುಗಳ ದಿನವನ್ನು ಆಚರಿಸಲಾಯಿತು. ಬೆಳಗಿನ ಪ್ರಾರ್ಥನೆಯ ಸಮಯದಲ್ಲೇ ಶಿಕ್ಷಕರಾದ ಬಿ ಜಿ ಪ್ರಕಾಶ ಮಕ್ಕಳಿಗೆ ಗ್ರಾಹಕರ ಹಕ್ಕುಗಳ ದಿನದ ಕುರಿತು ಮಾಹಿತಿ ನೀಡಿದರು. ಈ ದಿನದ ಆಚರಣೆಯ ಹಿನ್ನೆಲೆ, ಯಾವಾಗಿನಿಂದ ಈ ದಿನವನ್ನು ಆಚರಿಸಲಾಗುತ್ತಿದೆ, ಅದರ ಉದ್ದೇಶ ಮತ್ತು ಗ್ರಾಹಕರು ವ್ಯಾಪಾರಿಗಳಿಂದ ಮೋಸ ಹೋದಂತ ಸಂದರ್ಭದಲ್ಲಿ ಗ್ರಾಹಕ ನ್ಯಾಯಾಲಯಗಳ ಮೂಲಕ ಪರಿಹಾರ ಪಡೆಯಬಹುದೆಂಬ ಮಾಹಿತಿಯನ್ನು ತಿಳಿಸಿದರು. ಇತರ ಶಿಕ್ಷಕರು ಉಪಸ್ಥಿತರಿದ್ದರು. 

 

Monday, March 7, 2022

SSLC ವಿದ್ಯಾರ್ಥಿಗಳಿಗೆ "ಪರೀಕ್ಷೆ ಒಂದು ಹಬ್ಬ - ಬನ್ನಿ ಸಂಭ್ರಮಿಸೋಣ" ಕಾರ್ಯಕ್ರಮ.

ಇಂದು ನಮ್ಮ ಶಾಲೆಯಲ್ಲಿ SSLC ವಿದ್ಯಾರ್ಥಿಗಳಿಗೆ "ಪರೀಕ್ಷೆ ಒಂದು ಹಬ್ಬ - ಬನ್ನಿ ಸಂಭ್ರಮಿಸೋಣ" ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.  ಪಾಂಡೋಮಟ್ಟಿ ಕ್ಲಸ್ಟರ್ ನ ECO ಮೌನೇಶ್ವರಾಚಾರ್ ಭಾಗವಹಿಸಿ ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಮುಖ್ಯಶಿಕ್ಷಕರಾದ ಟಿ. ಧನಂಜಯ ವಹಿಸಿದ್ದರು.

ನಮ್ಮ ಎಸ್.ಎಸ್.ಎಲ್.ಸಿ ಪರೀಕ್ಷಾ ಕೇಂದ್ರಕ್ಕೆ ಲಗತ್ತಾಗ ಶಾಲೆಗಳಾದ ನಮ್ಮಶಾಲೆ (ಗೊಪ್ಪೇನಹಳ್ಳಿ), ವಡ್ಡನಹಾಳ್, ಕಂಚಿಗನಹಾಳ್ ಮತ್ತು ರಾಜಗೊಂಡನಹಳ್ಳಿ ಶಾಲೆಯ ಎಸ್.ಎಸ್.ಎಲ್.ಸಿ ಮಕ್ಕಳು ಇಂದಿನ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಇಂಗ್ಲೀಷ್, ವಿಜ್ಞಾನ, ಗಣಿತ ವಿಷಯಗಳ ಸಂಪನ್ಮೂಲ ವ್ಯಕ್ತಿಗಳಿಂದ ಆಯಾ ವಿಷಯಗಳ ಪರೀಕ್ಷಾ ತಯಾರಿ ಬಗ್ಗೆ ಸಂವಾದ ಏಪ್ರಡಿಸಲಾಗಿತ್ತು. ಹಾಗೆಯೇ ವ್ಯಕ್ತಿತ್ವ ವಿಕಸನ ತರಬೇತಿಯನ್ನೂ ಏರ್ಪಡಿಸಲಾಗಿತ್ತು. 


Thursday, March 3, 2022

SSLC ವಿದ್ಯಾರ್ಥಿಗಳ ಪೋಷಕರ ಸಭೆ 03-03-2022

ಇಂದು ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳ ಪೋಷಕರ ಸಭೆಯನ್ನು ಆಯೋಜಿಸಲಾಗಿತ್ತು. ರಾಜ್ಯಮಟ್ಟದ ಪೂರ್ವ ಸಿದ್ಧತಾ ಪರೀಕ್ಷೆಯ ಫಲಿತಾಂಶ ಕುರಿತು ಚರ್ಚಿಸಲಾಯಿತು....

 

Monday, February 28, 2022

ರಾಷ್ಟ್ರೀಯ ವಿಜ್ಞಾನ ದಿನಾಚರಣೆ

ಸರ್ ಸಿ ವಿ ರಾಮನ್ ರವರ ಜನ್ಮದಿನವನ್ನು ರಾಷ್ಟ್ರೀಯ ವಿಜ್ಞಾನ ದಿನವನ್ನಾಗಿ ಇಂದು ಆಚರಿಸಲಾಯಿತು. ಶಾಲೆಯ  ವಿಜ್ಞಾನ ಶಿಕ್ಷಕರಾದ ಡಿ ಯೋಗೇಂದ್ರಪ್ಪ ಮತ್ತು ಟಿ ಕೆ ಶಿವಕುಮಾರ್ ಮಾರ್ಗದರ್ಶನದಲ್ಲಿ ವಿದ್ಯಾರ್ಥಿಗಳು ಹಲವಾರು ಪ್ರಯೋಗಗಳನ್ನು ಮಾಡಿ ವಿವರಿಸಿದರು. ಎಲ್ಲಾ ವಿದ್ಯಾರ್ಥಿಗಳು ಆಸಕ್ತಿಯಿಂದ ವೀಕ್ಷಿಸುತ್ತಿದ್ದರು... ಮುಖ್ಯಶಿಕ್ಷಕರಾದ ಟಿ ಧನಂಜಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಎಲ್ಲಾ ಶಿಕ್ಷಕರು ಕಾರ್ಯಕ್ರಮಕ್ಕೆ ಸಹಕರಿಸಿದರು. ಇಂದು ಎಲ್ಲರಿಗೂ ಸಿಹಿ ಊಟದ ವ್ಯವಸ್ಥೆ ಮಾಡಲಾಗಿತ್ತು. 

ರಾಷ್ಟ್ರೀಯ ವಿಜ್ಞಾನ ದಿನದಂದು ವಿದ್ಯಾರ್ಥಿಗಳ ರಂಗೋಲಿಯ ರಂಗಿನಲ್ಲಿ ಅರಳಿದ ವಿಜ್ಞಾನ ವಿಷಯದ ಚಿತ್ರಗಳು.


Sunday, February 27, 2022

ಕಲೋತ್ಸವ ಸ್ಪರ್ಧೆಯಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

ಶಾಲಾ ಮಟ್ಟದ ಕಲೋತ್ಸವ ಸ್ಪರ್ಧೆಯಲ್ಲಿ ಭಾಗವಹಿಸಿದ ಕುಶಾಲ್‌ ಪಿ ಕೆ. 10ನೇ ತರಗತಿ ವಿದ್ಯಾರ್ಥಿ ಜಾನಪದ ವಾದ್ಯ ಪ್ರಕಾರವಾದ ವೀರಗಾಸೆಯ ಸಮಾಳ ನುಡಿಸುವ ವೀಡಿಯೋವನ್ನು ಕಲೋತ್ಸವ 2021 ರ ವೆಬ್‌ಸೈಟ್‌ಗೆ ಅಪ್‌ಲೋಡ್‌ ಮಾಡಲಾಗಿತ್ತು. ಇದೀಗ  ಆ ವಿದ್ಯಾರ್ಥಿ ಜಿಲ್ಲಾ ಮಟ್ಟ ಕಲೋತ್ಸವ ಪಟ್ಟಿಯಲ್ಲಿ ಸ್ಥಾನ ಪಡೆದು ಶಾಲೆಗೆ ಕೀರ್ತಿ ತಂದಿರುತ್ತಾನೆ. ಶಾಲೆಯ ಶಿಕ್ಷಕರುಗಳು ಮತ್ತು ವಿದ್ಯಾರ್ಥಿಗಳು ಅಭಿನಂದನೆ ಸಲ್ಲಿಸಿರುತ್ತಾರೆ.

 


Friday, February 18, 2022

ಶಾಲಾ ವಿದ್ಯಾರ್ಥಿಗಳಿಗೆ ಮಾದಕ ವಸ್ತುವಿನ ನಿಯಂತ್ರಣ ಕುರಿತು ಒಂದು ದಿನದ ಜಾಗೃತಿ ಕಾರ್ಯಕ್ರಮ


ರಾಜ್ಯ ಮಟ್ಟದ ಸಮನ್ವಯ ಸಂಸ್ಥೆ ಕರ್ನಾಟಕ ಮತ್ತು ಶ್ರೀ ರುದ್ರೇಶ್ವರ ಪ್ರೌಢಶಾಲೆಯ ಸಹಯೋಗದೊಂದಿಗೆ ಮಾದಕ ವಸ್ತುಗಳ ನಿಯಂತ್ರಣ ಕುರಿತ ಒಂದು ದಿನದ ಜಾಗೃತಿ ಕಾರ್ಯಕ್ರಮವನ್ನು ಇಂದು ಆಯೋಜಿಸಲಾಗಿತ್ತು.