ಶಾಲಾ ಬ್ಲಾಗ್ ನ ಉದ್ಘಾಟನಾ ದಿನಾಂಕ: 15-08-2020

Tuesday, July 12, 2022

Monday, July 11, 2022

ವಿಶ್ವ ಜನಸಂಖ್ಯಾ ದಿನಾಚರಣೆ

ಇಂದು ಬೆಳಗಿನ ಪ್ರಾರ್ಥನೆಯ ಸಂದರ್ಭದಲ್ಲಿ ವಿಶ್ವ ಜನಸಂಖ್ಯಾ ದಿನಾಚರಣೆಯ ಕುರಿತು ಮಾಹಿತಿ ಹಂಚಿಕೊಳ್ಳಲಾಯಿತು.

 

Tuesday, June 21, 2022

ಅಂತರಾಷ್ಟ್ರೀಯ ಯೋಗ ದಿನ

ಇಂದು ನಮ್ಮ ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನದ ಪ್ರಯುಕ್ತ ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಯೋಗಾಸನ ಮಾಡುವ ಮೂಲಕ ಯೋಗ ದಿನವನ್ನು ಯಶಸ್ವಿಯಾಗಿ ಆಚರಿಸಲಾಯಿತು. ಇದೇ ಸಂದರ್ಭದಲ್ಲಿ ಯೋಗ,ಪ್ರಾಣಾಯಾಮ ಮತ್ತು ಧ್ಯಾನದ ಮಹತ್ವವನ್ನು ವಿವರಿಸಿ ಪ್ರತಿನಿತ್ಯ  ಬೆಳಗ್ಗೆ ಮನೆಯಲ್ಲಿ ಅಭ್ಯಾಸ ಮಾಡುವಂತೆ ತಿಳಿಸಲಾಯಿತು.

 




Monday, June 20, 2022

10ನೇ ತರಗತಿ ವಿದ್ಯಾರ್ಥಿಗಳಿಗೆ ಧನುರ್ವಾಯು ಚುಚ್ಚುಮದ್ದು ನೀಡಿಕೆ


 

2022-23 ನೇ ಸಾಲಿನ ಶಾಲಾ ಸಂಸತ್ತಿನ ಸಚಿವ ಸಂಪುಟದ ಮೊದಲ ಸಭೆ

ಇಂದು ನಮ್ಮ ಶಾಲೆಯಲ್ಲಿ ಮುಖ್ಯೋಪಾಧ್ಯಾಯರ ಅಧ್ಯಕ್ಷತೆಯಲ್ಲಿ 2022-23 ನೇ ಸಾಲಿನ ಶಾಲಾ ಸಂಸತ್ತಿನ ಮೊದಲ ಸಚಿವ ಸಂಪುಟ ಸಭೆಯನ್ನು ಕರೆಯಲಾಗಿತ್ತು.  ಎಲ್ಲಾ ತರಗತಿಗಳ ವಿದ್ಯಾರ್ಥಿ ಪ್ರತಿನಿಧಿಗಳು ಮತ್ತು ವಿದ್ಯಾರ್ಥಿ ಸಂಘದ ಕಾರ್ಯದರ್ಶಿ, ಸಹ ಕಾರ್ಯದರ್ಶಿ ಹಾಗೂ ಅಧ್ಯಾಪಕ ವೃಂದದವರು ಭಾಗವಹಿಸಿದ್ದರು. ಸಭೆಯಲ್ಲಿ ಖಾತೆಗಳ ಹಂಚಿಕೆ ಮಾಡಲಾಯಿತು ಮತ್ತು ಅವರವರ ಖಾತೆಯ ಜವಾಬ್ದಾರಿಗಳನ್ನು ತಿಳಿಸಿಹೇಳಿ ಪ್ರತಿ ಎರಡೆರಡು ಖಾತೆಗೆ ಉಸ್ತುವಾರಿಯಾಗಿ ಶಿಕ್ಷಕರನ್ನು ಹಂಚಿಕೆ ಮಾಡಿ ಅವರ ಮಾರ್ಗದರ್ಶನದಲ್ಲಿ ಉತ್ತಮವಾಗಿ ತಮ್ಮ ತಮ್ಮ ಖಾತೆಯ ಜವಾಬ್ದಾರಿಗಳನ್ನು ನಿರ್ವಹಿಸಿಕೊಂಡು ಹೋಗಲು ಮಾರ್ಗದರ್ಶನ ಮಾಡಲಾಯಿತು. 

 

Monday, June 6, 2022

ವಿಶ್ವ ಪರಿಸರ ದಿನಾಚರಣೆ

ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ನಮ್ಮ ಶಾಲೆಯಲ್ಲಿ ಇಕೋಕ್ಲಬ್ ನ ಆಶ್ರಯದಲ್ಲಿ ಶಾಲಾ ಆವರಣದಲ್ಲಿ ತೆಂಗಿನ ಸಸಿಯನ್ನು ನಡಲಾಯಿತು.